ವಿದ್ಯಾಭಾರತಿ ಜಿಲ್ಲಾ ಮಟ್ಟದ ಗಣಿತ-ವಿಜ್ಞಾನ ಮೇಳದಲ್ಲಿ ಉಪ್ಪಿನಂಗಡಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

0

ಪುತ್ತೂರು :ಆ.13 ರಂದು ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕಿಶೋರ ವರ್ಗದಲ್ಲಿ ಉಪ್ಪಿನಂಗಡಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ವಿಜೇತರಾದರು.9ನೇ ತರಗತಿಯ ವಿದ್ವನ್ ಎನ್ ಅವರು ಸೃಜನಾತ್ಮಕ ಮಾದರಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು. ಅದೇ ತರಗತಿಯ ಹರ್ಷಿತ್ ಅವರು ಮಣ್ಣಿನ ಮಾದರಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಮತ್ತು ಶ್ರೇಯಸ್ ಈ ಜೆ ಅವರು ವಿಜ್ಞಾನ ಪ್ರಯೋಗ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದರು.

LEAVE A REPLY

Please enter your comment!
Please enter your name here