







ಆಲಂಕಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ,ಲಯನ್ಸ್ ಕ್ಲಬ್ ದುರ್ಗಾಂಬಾ ಆಲಂಕಾರು,ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ,ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಅಲಂ ಕಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ದೀನ ದಯಾಳು ರೈತ ಸಭಾಭವನ ದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು


ಆಲಂಕಾರು ಶ್ರೀ ದುರ್ಗಾಂಬಾ ವಿದ್ಯಾಸಂಸ್ಥೆಯ ಸಂಚಾಲಕರಾದ ದಯಾನಂದ ರೈ ಮನವಳಿಕೆ ಗುತ್ತು ದೀಪ ಬೆಳಗಿಸಿ ಶಿಬಿರ ಉದ್ಘಾಟಿಸಿ ಮಾತನಾಡಿ, ಪಂಚೇಂದ್ರಿಯಗಳಲ್ಲಿ ಕಣ್ಣು ಅತ್ಯಂತ ಪ್ರಾಮುಖ್ಯ ಸ್ಥಾನವನ್ನು ಪಡೆದಿದೆ. ಕಣ್ಣಿನ ಸುರಕ್ಷತೆ ಯನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಗ್ರಾಮೀಣ ಭಾಗದ ಜನರಿಗೆ ಉಪಯುಕ್ತವಾಗಲಿ ಎನ್ನುವ ಸದುದ್ದೇಶದಿಂದ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಲಯನ್ಸ್ ಕ್ಲಬ್ ದುರ್ಗಾಂಬಾ ಆಲಂಕಾರು,ದುರ್ಗಾಂಬಾ ವಿದ್ಯಾಸಂಸ್ಥೆ ಒಟ್ಟು ಸೇರಿ ಈ ಶಿಬಿರವನ್ನು ಆಯೋಜಿಸಿದೆ ಇದರ ಸದುಪಯೋಗವನ್ನು ಎಲ್ಲಾರು ಪಡೆದುಕೊಳ್ಳುವಂತೆ ತಿಳಿಸಿದರು.




ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಮಂಜುನಾಥ್ ರವರು ಗ್ರಾಮೀಣ ಭಾಗದಲ್ಲಿ ಇಂತಹ ಶಿಬಿರಗಳ ಅಗತ್ಯತೆಯನ್ನು ವಿವರಿಸಿ ಕಣ್ಣಿನ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ್ ಭಟ್ ಉಪ್ಪಂ ಗಳ ರವರು ಮಾತನಾಡಿ ನಮ್ಮಭಾಗದ ನಾಗರಿಕರ ಕಣ್ಣಿನ ಆರೋಗ್ಯದ ದೃಷ್ಟಿಯಿಂದ ಈ ಶಿಬಿರವನ್ನು ಎಲ್ಲಾರ ಸಹಕಾರದೊಂದಿಗೆ ಆಯೋಜಿಸಿದ್ದು ನಮ್ಮ ಪರಂಪರೆ,ಸಂಸ್ಕೃತಿಯಲ್ಲಿ ವೈದ್ಯರನ್ನು ದೇವರಂತೆ ಕಂಡವರು ಆ ಮೂಲಕ ಎಲ್ಲರಿಗೂ ಆರೋಗ್ಯ ಭಾಗ್ಯ ಲಭಿಸಲಿ ಎಂದು ತಿಳಿಸಿ ಶುಭಹಾರೈಸಿದರು.
ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಇದರ ಮುಖ್ಯಸ್ಥರಾದ ಶ್ರೀಮತಿ ಲಲಿತ ,ಡಾ!.ಸೌಮ್ಯ ಸೇರಿದಂತೆ ಸಿ.ಎಚ್.ಒ ಬೀನ್ಸಿ ಸೇರಿದಂತೆ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೋಹರಪ್ರಕಾಶ್.ಡಿ,ನಿರ್ದೇಶಕರು, ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಹಲವು ಮಂದಿ ಶಿಬಿರದಲ್ಲಿ ಸಹಕರಿಸಿದರು.
ಶಿಬಿರದಲ್ಲಿ 250ಕ್ಕೂ ಮಿಕ್ಕಿ ಸಾರ್ವಜನಿಕರು ನೇತ್ರ ತಪಾಸಣೆಯನ್ನು ಮಾಡಿಸಿಕೊಂಡರು 180 ಕನ್ನಡಕಗಳನ್ನು ಸ್ಥಳದಲ್ಲಿ ಉಚಿತವಾಗಿ ನೀಡಲಾಯಿತು 20 ಜನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ಶಿಬಿರದಲ್ಲಿ ಆಯ್ಕೆಗೊಂಡು ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಾಗಿ ಜಿಲ್ಲಾ ವೆನ್ ಲಾಕ್ ಆಸ್ಪತ್ರೆಗೆ ಶಿಫಾರಸುಗೊಂಡರು. ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ರಾದ ಲಯನ್ ಪದ್ಮಪ್ಪ ಗೌಡ ರವರು ಸ್ವಾಗತಿಸಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಿತ್ಯಾನಂದ ಶೆಟ್ಟಿ ಮನಬಳಿಕೆ ಗುತ್ತು ರವರು ಧನ್ಯವಾದ ಸಮರ್ಪಿಸಿದರು. 65ನೇ ನೇತ್ರ ಚಿಕಿತ್ಸಾ ಶಿಬಿರದ ಸಂಘಟಕ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕರಾದ ಗಂಗಾಧರ ಶೆಟ್ಟಿ ಅಮೆತ್ತಿಮಾರುಗುತ್ತು ಕಾರ್ಯಕ್ರಮ ನಿರೂಪಿಸಿದರು










