






ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮದ ಕಡಮದಪಳಿಕೆ ಭಾಗದಲ್ಲಿ ಕಾಡಾನೆ ದಾಳಿ ನಡೆಸಿ ಕೃಷಿ ಹಾನಿಗೊಳಿಸಿರುವ ಘಟನೆ ಆ.13ರಂದು ರಾತ್ರಿ ನಡೆದಿದೆ.



ಕಾಡಾನೆ ದಾಳಿ ನಡೆಸಿ ಅಡಿಕೆ,ತೆಂಗು,ಬಾಳೆ ಗಿಡಗಳನ್ನು ನಾಶಗೊಳಿಸಿರುವುದಾಗಿ ವರದಿಯಾಗಿದೆ. ಈ ಭಾಗದಲ್ಲಿ ಪದೇ ಪದೇ ಕಾಡಾನೆಗಳು ದಾಳಿ ನಡೆಸಿ ಕೃಷಿ ಹಾನಿಗೊಳಿಸುತ್ತಿದ್ದು ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ.













