






ಪುತ್ತೂರು: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪುತ್ತೂರು ತಾಲೂಕು ಆಡಳಿತದ ವತಿಯಿಂದ ಕಿಲ್ಲೆ ಮೈದಾನದಲ್ಲಿ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ಎ.ಸಿ. ಸ್ಟೆಲ್ಲ ವರ್ಗಿಸ್, ಶಾಸಕ ಅಶೋಕ್ ಕುಮಾರ್ ರೈ ಅವರು ಭಾಗವಹಿಸಿದರು. ನಂತರ ಅವರು ಸ್ವಾತಂತ್ರ್ಯ ದಿನದ ಶುಭಾಶಯ ಸಂದೇಶ ನೀಡಿದರು.




ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪೊಲೀಸ್, ಹೋಂ ಗಾರ್ಡ್, NCC, ಸ್ಕೌಟ್ಸ್ & ಗೈಡ್ಸ್ ತಂಡಗಳಿಂದ ಪಥಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರು ಹಾಗೂ ಸಾರ್ವಜನಿಕರು ಭಾಗವಹಿಸಿದರು.










