







ಕಡಬ: ಕಡಬ ತಾಲೂಕು ಆಡಳಿತ ಸೌಧದ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಕಡಬ ತಹಶೀಲ್ದಾರ್ ಗಣೇಶ್ ಸಾವಣೂರ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ಪೊಲೀಸ್ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಶಿಸ್ತಿನೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಗೌರವ ಹೆಚ್ಚಿಸಿದರು.



ಕಾರ್ಯಕ್ರಮದ ಅಂಗವಾಗಿ ಪೊಲೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಪಥಸಂಚಲನ ಮತ್ತು ಶಿಸ್ತಿನ ಪ್ರದರ್ಶನ ಗಮನ ಸೆಳೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸ್ಕೌಟ್ಸ್-ಗೈಡ್ಸ್ ಸೇರಿದಂತೆ ಹಲವು ತಂಡಗಳು ಉತ್ಸಾಹದಿಂದ ಪಾಲ್ಗೊಂಡಿದ್ದು, ತಾಲೂಕು ಆಡಳಿತ ಸೌಧದ ಆವರಣ ದೇಶಭಕ್ತಿಯ ವಾತಾವರಣದಿಂದ ಕಂಗೊಳಿಸಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು. ರಾಷ್ಟ್ರಧ್ವಜದ ಮುಂದೆ ಒಂದಾಗಿ ನಿಂತು ದೇಶದ ಏಕತೆ, ಅಖಂಡತೆ ಹಾಗೂ ಸಂವಿಧಾನದ ಮೌಲ್ಯಗಳನ್ನು ಗೌರವಿಸಲಾಯಿತು.










