






ಕಡಬ: ಟೀಮ್ ಅಧೀರ ಕಡಬ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಅರಿವು ಕಾರ್ಯಾಗಾರವನ್ನು ಆ.16ರಂದು ಆಯೋಜಿಸಲಾಗಿದೆ.


ಕಡಬದ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಕಾರ್ಯಕ್ರಮ ನಡೆಯಲಿದೆ. 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ವಿಭಾಗ ಹಾಗೂ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆ ನಡೆಯಲಿದೆ.



ಚಿತ್ರಕಲಾ ಸ್ಪರ್ಧೆಯಲ್ಲಿ ಪರಿಸರ ಸಂರಕ್ಷಣೆ, ಭಾರತೀಯ ಸಂಸ್ಕೃತಿ ಮತ್ತು ಹಬ್ಬಗಳು ಸೇರಿದಂತೆ ವಿಷಯಗಳನ್ನು ಆಧರಿಸಿ ವಿದ್ಯಾರ್ಥಿಗಳು ತಮ್ಮ ಕಲಾ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಗುವುದು. ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನಕ್ಕೆ ರೂ.2,000 ಹಾಗೂ ದ್ವಿತೀಯ ಸ್ಥಾನಕ್ಕೆ ರೂ.1,000 ಬಹುಮಾನ ನಿಗದಿಪಡಿಸಲಾಗಿದೆ. ಇದರೊಂದಿಗೆ ಮಾದಕ ವಸ್ತುಗಳ ನಿರ್ಮೂಲನೆ ಹಾಗೂ ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಾಗಾರವೂ ನಡೆಯಲಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಸ್ಥಳದಲ್ಲಿ ಹಾಜರಿದ್ದು, ಅಗತ್ಯ ಕಲಿಕಾ ಸಾಮಗ್ರಿಗಳನ್ನು ತಮ್ಮೊಂದಿಗೆ ತರಬೇಕು ಎಂದು ಆಯೋಜಕರು ತಿಳಿಸಿದ್ದಾರೆ. ಸ್ಪರ್ಧೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ 8197359365, 9591664660 ಹಾಗೂ 8748083897 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.









