






ಪುತ್ತೂರು: ಇಲ್ಲಿನ ಪ್ರಮುಖ ವಾಣಿಜ್ಯ ಸಂಕೀರ್ಣವಾದ ಸಿ.ಪಿ.ಸಿ ಪ್ಲಾಜಾದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಕೆ.ಸಿ. ಅಸೋಸಿಯೇಟ್ಸ್ನ ಮಾಲೀಕರಾದ ಚಂದ್ರಶೇಖರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುತ್ತಾ, ಪ್ರತಿಯೊಬ್ಬ ನಾಗರಿಕರೂ ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.













