






ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಮೆತ್ತಡ್ಕದಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.ಶಾಲೆಯ ಸ್ಥಾಪಕ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವಪ್ರಸಾದ್ ಕೆಮ್ಮಿಂಜೆ, ವಿದ್ಯಾಭಿಮಾನಿ ದಿನೇಶ್ ಕಾಮತ್, ಡ್ಯಾಶ್ ಮಾರ್ಕೆಟ್ ಮಾಲಕರು ಹಾಗೂ ಟ್ರಸ್ಟ್ ಪ್ರತಿನಿಧಿ ನಳಿನಿ ಪಿ ಶೆಟ್ಟಿ, ಸಿಝ್ಲರ್ ಮಾಲಕರು ಹಾಗೂ ಟ್ರಸ್ಟ್ ಪ್ರತಿನಿಧಿ ಪ್ರಸನ್ನ ಕುಮಾರ್ ಶೆಟ್ಟಿ, ಟ್ರಸ್ಟ್ ಪ್ರತಿನಿಧಿ ರವೀಂದ್ರ ಹೆಗ್ಡೆ ಭಟ್, ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಆಚಾರ್, ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಝ್, ಎಸ್.ಡಿ.ಎಂ.ಸಿ ಸದಸ್ಯರು, ಯುವಕ ಮಂಡಲದ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಶಝ್ಮ ಫಾತಿಮ, ಅಶ್ಫಿಯಾ ಫಾತಿಮ, ಮಿಸ್ಹಬಾ ಫರ್ಹನಾ ಹಾಗೂ ಫಾತಿಮ ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು.ಕಾರ್ಯಕ್ರಮವನ್ನು ಸಹ ಶಿಕ್ಷಕಿ ಮರಿಯಾ ಅಶ್ರಫ್ ನಿರೂಪಿಸಿದರು.












