






ಸುಳ್ಯ: ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಸುಳ್ಯ ತಾಲೂಕು ತಹಶೀಲ್ದಾರ್ ಹಾಗೂ ನಗರ ಪಂಚಾಯತ್ ಆಡಳಿತಾಧಿಕಾರಿ ಮಂಜುಳಾ ಧ್ವಜಾರೋಹಣ ನೆರವೇರಿಸಿದರು. ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫ ಸಂದೇಶ ನೀಡಿದರು.ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಯಕರ ಮಡ್ತಿಲ, ಇಂಜಿನಿಯರ್ ವೆಂಕಟೇಶ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.












