






ಈಶ್ವರಮಂಗಲ: ಶ್ರೀ ಕ್ಷೇತ್ರ ಹನುಮಗಿರಿಯ ಶ್ರೀ ಭಾರತೀ ಅಮರ ಜ್ಯೋತಿ ಮಂದಿರ ಅಮರಗಿರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಹನುಮಗಿರಿಯ ಆಡಳಿತ ಧರ್ಮದರ್ಶಿಗಳಾದ ನನ್ಯ ಅಚ್ಯುತ ಮೂಡೆತ್ತಾಯ ಅವರು ವಹಿಸಿ, ಕಾರ್ಯಕ್ರಮಕ್ಕೆ ಶುಭಕೋರಿದರು. ಈ ಸಂದರ್ಭದಲ್ಲಿ ಈಶ್ವರಮಂಗಲ ಶ್ರೀ ಗಜಾನನ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಚಿನ್ಮಯ್ ಪಿ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.



ಇದೇ ವೇಳೆಯಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ್ವರಮಂಗಲದ ಸಿಆರ್ಪಿಎಫ್ (CRPF) ಯೋಧರಾದ ಶ್ರೀ ರಾಧಾಕೃಷ್ಣ ರೈ ಅವರಿಗೆ ಗೌರವಾಪಣೆ ಸಲ್ಲಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಚಾಲಕರು, ಕ್ಷೇತ್ರ ಸಂವರ್ಧನಾ ಸಮಿತಿಯ ಸರ್ವ ಸದಸ್ಯರು ಹಾಗೂ ದೇಶಭಕ್ತ ಬಂಧುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು










