ESR ಪ್ರೆಸಿಡೆನ್ಸಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು, ಆ.15: ಪುತ್ತೂರಿನ ESR ಪ್ರೆಸಿಡೆನ್ಸಿ ಶಾಲೆಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ, ಸಂಭ್ರಮ ಹಾಗೂ ವೈಭವದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಕೀರ್ತಿ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಜಾಕೀರ್ ಹುಸೈನ್ ಅನುಪಸ್ಥಿತಿಯಲ್ಲಿ ಟ್ರಸ್ಟ್‌ನ ಸದಸ್ಯ ವಿ.ಕೆ. ಶರೀಫ್ ಬಪ್ಪಳಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರ್ಯವು ಕೇವಲ ಸಂಭ್ರಮಿಸುವ ಹಕ್ಕಲ್ಲ; ಅದನ್ನು ಗೌರವಿಸಿ, ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆ ನೀಡುವ ಜವಾಬ್ದಾರಿಯೂ ಹೌದು ಎಂದು ಅವರು ನುಡಿದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಕೀಲ ಮತ್ತು ನೋಟರಿ, ಪುತ್ತೂರು ಬಾರ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಜಗನ್ನಾಥ ರೈ ಜಿ ಆಗಮಿಸಿದ್ದರು. ವಿದ್ಯಾರ್ಥಿಗಳು ಮುಂದಿನ ಭಾರತದ ಭವಿಷ್ಯ ಏಕತೆಯೊಂದಿಗೆ ದೇಶಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಕೇವಲವಾದದ್ದಲ್ಲ ಅದು ಅನೇಕರ ಬಲಿದಾನದ ಫಲಿತಾಂಶ, ಇದೆಲ್ಲವನ್ನು ನಾವು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.ಅತಿಥಿಗಳಾಗಿ ESR ಪ್ರೆಸಿಡೆನ್ಸಿ ಶಾಲೆಯ ಶಿಕ್ಷಕ ಪೋಷಕ ಸಂಘದ ಅಧ್ಯಕ್ಷ ಸಿರಾಜುದ್ದೀನ್ ವಿದ್ಯಾರ್ಥಿಗಳಿಗೆ ಬಾವುಟದ ಮಹತ್ವ ಮತ್ತು ಅದನ್ನು ಹೇಗೆ ಬಳಸಬೇಕು ಎಂಬುದರ ಬಗ್ಗೆ ತಿಳಿಸಿಕೊಟ್ಟರು. ಅಬ್ದುಲ್ ಹಮೀದ್ ಸಾಲ್ಮರ ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿಸ್ಮಿತ ಬಂಗೇರ ಕೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುತ್ತಾ, ವಿದ್ಯಾರ್ಥಿಗಳು ದೇಶದ ಏಕತೆ, ಶಾಂತಿ ಹಾಗೂ ಅಭಿವೃದ್ಧಿಗಾಗಿ ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು ಎಂಬ ಸಂದೇಶವನ್ನು ಸಾರಿದರು ಮತ್ತು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಶಿಫಾನ ಕಾರ್ಯಕ್ರಮ ಸಂಯೋಜಿಸಿ ವಂದಿಸಿದರು. ಶಿಕ್ಷಕಿ ಸಯಿದಾ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ನಿರ್ದೇಶಕರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ದೇಶಭಕ್ತಿ, ಏಕತೆ ಮತ್ತು ರಾಷ್ಟ್ರಪ್ರೇಮದ ಸಂದೇಶವನ್ನು ಸಾರುವ ವಿವಿಧ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆಯಿತು. ಈ ಸಂದರ್ಭದಲ್ಲಿ ಶಾಲಾಡಳಿತ ಮಂಡಳಿ ಮತ್ತು ಶಿಕ್ಷಕ ರಕ್ಷಕ ಸಂಘದ ಗೌರವಾಧ್ಯಕ್ಷ, ಪತ್ರಕರ್ತ ಅಬ್ದುಲ್ ಹಮೀದ್ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿದರು.

ಶಾಲಾ School Pupil Leader ಮಾಸ್ಟರ್ ಜಿಶಾನ್ ಇಬ್ರಾಹಿಂ ಎಸ್ ಹಾಗೂ ಶಾಲಾ ಕ್ಯಾಬಿನೆಟ್‌ನ ಎಲ್ಲಾ ಸದಸ್ಯರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

LEAVE A REPLY

Please enter your comment!
Please enter your name here