ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಅವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.


ಉಪಾಧ್ಯಕ್ಷ ರವಿಚಂದ್ರ, ನಿರ್ದೇಶಕರಾದ ಸರ್ವೋತ್ತಮ ಗೌಡ ಅವರು ಸಂದರ್ಭೋಚಿತವಾಗಿ ಮಾತನಾಡಿದರು. ನಿರ್ದೇಶಕರಾದ ಹರೀಶ್, ಉಷಾ ಅಂಚನ್, ಜಿನ್ನಪ್ಪ ಗೌಡ, ಭಾಸ್ಕರ್ ರೈ, ಬಾಬು ನಾಯ್ಕ, ಕೌಕ್ರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಇಬ್ರಾಹಿಂ ಎಂ.ಕೆ., ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಸ್ವಾಗತಿಸಿದರು. ವ್ಯವಸ್ಥಾಪಕ ಮಹೇಶ್ ಎಂ. ಟಿ. ವಂದಿಸಿದರು.

LEAVE A REPLY

Please enter your comment!
Please enter your name here