ರೋಟರಿ ಕ್ಲಬ್ ಉಪ್ಪಿನಂಗಡಿಯಿಂದ ಸ್ವಾತಂತ್ರ್ಯೋತ್ಸವ

0

ಪುತ್ತೂರು: ರೋಟರಿ ಕ್ಲಬ್ ಉಪ್ಪಿನಂಗಡಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ನಿವೃತ್ತ ಕಮಾಂಡೆಂಟ್ ಚಂದಪ್ಪ ಮೂಲ್ಯ ಹಾಗೂ ರೋಟರಿ ಸದಸ್ಯ ಚಂದಪ್ಪ ಮೂಲ್ಯರವರು ಧ್ವಜಾರೋಹಣಗೈದು ಸ್ವಾತಂತ್ರೋತ್ಸವದ ಕುರಿತು ಮಾತನಾಡಿದರು. ಬಳಿಕ ಬಿಳಿಯೂರು-ಮಾಡತ್ತಾರು ಸರಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ, A+/A ಗ್ರೇಡ್ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ಲಬ್ ಕಮ್ಯೂನಿಟಿ ಸರ್ವಿಸ್ ನಿರ್ದೇಶಕಿ ವಂದನಾರವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ರೂ.15 ಸಾವಿರ ನಗದು ಬಹುಮಾನ, ವಿದ್ಯಾರ್ಥಿವೇತನ ಹಾಗೂ 30 ಸಾವಿರದಷ್ಟು ರಿಕ್ಷಾ ಬಾಡಿಗೆ  ಹಸ್ತಾಂತರಿಸಿದರು. 

ರೋಟರಿ ಕ್ಲಬ್ ಉಪ್ಪಿನಂಗಡಿ ಅಧ್ಯಕ್ಷ ಕೇಶವ ಪಿ.ಎಂ, ಕಾರ್ಯದರ್ಶಿ ರಾಜೇಶ್ ದಿಂಡಿಗಲ್, ಪೂರ್ವಾಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಕೋಶಾಧಿಕಾರಿ ಶ್ರೀಕಾಂತ್ ಪಟೀಲ್, ವಲಯ ಸೇನಾನಿ ಅನುರಾಧಾ ಆರ್.ಶೆಟ್ಟಿ, ಪೂರ್ವಾಧ್ಯಕ್ಷರುಗಳು, ಸದಸ್ಯ ಹರೀಶ್ ಪೂಜಾರಿ ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here