ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ರಾಮಕುಂಜ: ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮದ ಧ್ವಜಾರೋಹಣವನ್ನು ಭೂಸೇನೆಯ ನಿವೃತ್ತ ಯೋಧರಾದ ಶ್ರೀ ರಾಧಾಕೃಷ್ಣ ಆನ ಅವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ (ರಿ.), ರಾಮಕುಂಜದ ಕಾರ್ಯದರ್ಶಿಗಳಾದ ಶ್ರೀ ರಾಧಾಕೃಷ್ಣ ಕೆ. ಎಸ್. ಅವರು ವಹಿಸಿದ್ದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಮುಖ್ಯ ಭಾಷಣಕಾರರಾಗಿ ಡಾ. ತಾಳ್ತಜೆ ವಸಂತಕುಮಾರ್, ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥರು, ಮುಂಬಯಿ ವಿಶ್ವವಿದ್ಯಾಲಯ, ಅವರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶಭಕ್ತಿ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಗಳ ಕುರಿತು ಮಾತನಾಡಿದರು.


ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾಷಣ, ನೃತ್ಯ, ಹಾಡು ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ಈ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ಬಳಿಕ ರಸಮಂಜರಿ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಕೊನೆಯಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ವೆಂಕಟೇಶ್ ದಾಮ್ಲೆ ಅವರು ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಹಾಗೂ ಪ್ರೌಢಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here