ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಪುತ್ತೂರು: ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ, ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಬೊಳುವಾರು ವಿಶ್ವಕರ್ಮ ಸಭಾಭವನದ ಮುಂಭಾಗ ಆಚರಿಸಲಾಯಿತು.

ಇದೇ ಸಂದರ್ಭ ಸುಬ್ರಾಯ ಆಚಾರ್ಯ ಮತ್ತು ಮಕ್ಕಳು ಕೊಂಬೆಟ್ಟು, ಆಶಾ ಜ್ಯುವೆಲ್ಲರಿ ಕೋರ್ಟ್ ರಸ್ತೆ ಹಾಗೂ ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೆ. ಇವರು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಲಾಯಿತು.

ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ್ ಆಚಾರ್ಯ ಕೆ., ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೆ. ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಶಾಂತಿ ಸತೀಶ್ ಆಚಾರ್ಯ, ಗುರುಸೇವಾ ಪರಿಷತ್ ಪುತ್ತೂರು ಮಹಾಮಂಡಲ ಅಧ್ಯಕ್ಷ ವಿ. ಪುರುಷೋತ್ತಮ ಆಚಾರ್ಯ, ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಅಧ್ಯಕ್ಷ ಸುರೇಂದ್ರ ಆಚಾರ್ಯ, ಬೀರಮಲೆ ವಿಶ್ವಕರ್ಮ ಸಂಘ ನಿಕಟಪೂರ್ವ ಅಧ್ಯಕ್ಷ ಗಂಗಾಧರ ಆಚಾರ್ಯ, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here