







ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.17ರಂದು ನಾಗರ ಪಂಚಮಿ ಅಂಗವಾಗಿ ನಾಗನ ಕಟ್ಟೆಯಲ್ಲಿ ಅಭಿಷೇಕ,ನಾಗ ತಂಬಿಲ,ಶ್ರೀ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ,ಅನ್ನ ಸಂತರ್ಪಣೆ ನಡೆಯಲಿದೆ.


ಆ.18ರಂದು ಮಧ್ಯಾಹ್ನ ತಿಂಗಳ ಶುದ್ದ ಷಷ್ಠಿ ಪೂಜೆ ,ಅನ್ನ ಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಈ ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.













