ಈಶ್ವರಮಂಗಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

0

ಈಶ್ವರಮಂಗಲ: ಈಶ್ವರಮಂಗಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಸಂಭ್ರಮದಿಂದ ಆಚರಿಸಲಾಯಿತು.ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ, ಹೋಮ ಹಾಗೂ ಸರ್ಪದೇವರಿಗೆ ಹಾಲು, ಹೂವು, ಅರಶಿನ ಕುಂಕುಮ ಅರ್ಪಿಸಲಾಯಿತು. ಬೆಳಗ್ಗಿನಿಂದಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ನಾಗದೇವರಿಗೆ ಪ್ರಾರ್ಥನೆ ಸಲ್ಲಿಸಿ ಹರಕೆಗಳನ್ನು ತೀರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರು ಆಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here