ರಾಮಕುಂಜ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆ

0

ರಾಮಕುಂಜ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆ ಆ.15ರಂದು ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಎಂ.ಪಿ.ಶ್ರೀನಾಥ್ ಅವರು ಮಾತನಾಡಿ, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುನ ಹಾಲಿ ಸಮಿತಿಯ ಅವಧಿ ನ.23ಕ್ಕೆ ಕೊನೆಗೊಳ್ಳಲಿದೆ. ಕಳೆದ ನಾಲ್ಕೂವರೇ ವರ್ಷದಲ್ಲಿ ಜಿಲ್ಲೆಯಲ್ಲಿ 577 ಕಾರ್ಯಕ್ರಮ ಮಾಡಲಾಗಿದೆ. ಇದೊಂದು ದಾಖಲೆ ಆಗಿದೆ. 18 ತಾಲೂಕು ಸಮ್ಮೇಳನಗಳು ನಡೆದಿವೆ. ಈ ಪೈಕಿ ಕಡಬ, ಸುಳ್ಯ, ಮೂಲ್ಕಿ ತಾಲೂಕುಗಳಲ್ಲಿ ತಲಾ 3 ಸಮ್ಮೇಳನ ನಡೆದಿದೆ. 4 ಜಿಲ್ಲಾ ಸಾಹಿತ್ಯ ಸಮ್ಮೇಳನ, 2 ಹೋಬಳಿ ಸಮ್ಮೇಳನ, ಸುಳ್ಯದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆದಿದೆ. ಇದರಿಂದ ಒಳ್ಳೆಯ ಫಲಶ್ರುತಿ ಆಗಿದೆ. ಕಳೆದ ಎರಡು ವರ್ಷದಿಂದ ಕನ್ನಡ ಸಾಹಿತ್ಯ ಪರಿಷತ್ತುಗೆ ಯಾವುದೇ ಅನುದಾನ ದೊರೆತಿಲ್ಲ ಎಂದರು. ಅಂತರ್ರಾಷ್ಟ್ರೀಯ ಮಟ್ಟದ ಆನ್‌ಲೈನ್ ಕಾರ್ಯಕ್ರಮ ಈ ತಿಂಗಳಲ್ಲಿ ನಡೆಯಲಿದೆ. ಲೆಕ್ಕಪತ್ರ ಮಂಡನೆ, ಕನ್ನಡ ರಾಜ್ಯೋತ್ಸವ ಆಚರಣೆ, ದತ್ತಿನಿಧಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಡಾ| ಎಂ.ಪಿ.ಶ್ರೀನಾಥ್ ಅವರು, ಮನೆಗಳಲ್ಲಿ ಪುಸ್ತಕ ಗ್ರಂಥಾಲಯವಿದ್ದರೆ ಅವರಿಗೆ ’ಮನೆಗೊಂದು ಗ್ರಂಥಾಲಯ’ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದರು.


ಸಭೆಯಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಬಿ.ಐತ್ತಪ್ಪ ನಾಯ್ಕ್, ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಕೆ.ಸೇಸಪ್ಪ ರೈ ರಾಮಕುಂಜ, ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೆರಾಲ್, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಯದುಪತಿ ಗೌಡ, ಮೂಡಬಿದಿರೆ ತಾಲೂಕು ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ., ಜಿಲ್ಲಾ ಸಮಿತಿಯ ಪೂವಪ್ಪ ನೇರಳಕಟ್ಟೆ, ರಾಮಚಂದ್ರ ಪಲ್ಲತಡ್ಕ ಸುಳ್ಯ, ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವಾಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಗೌರವ ಕಾರ್ಯದರ್ಶಿ ನಾಗರಾಜ್ ಎನ್.ಕೆ.ಕಡಬ, ಗೌರವ ಕೋಶಾಧ್ಯಕ್ಷ ಕೆ.ಬಾಲಚಂದ್ರ ಮುಚ್ಚಿಂತಾಯ, ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಸಂಘಟನಾ ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ., ಸದಸ್ಯರಾದ ಪುಷ್ಪಾವತಿ ಎ., ಪ್ರೇಮಾ ಬಿ., ಎ.ಎನ್.ಕೊಳಂಬೆ, ಕಡಬ ತಾಲೂಕು 5ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಸಂಚಾಲಕ ಕಿಜಾನ ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಗಾಯತ್ರಿ ಯು.ಎನ್., ಸದಸ್ಯರಾದ ಆನಂದ ಎಸ್.ಟಿ., ಲೋಹಿತಾ ಎ., ಹರೀಶ್ ಆಚಾರ್ಯ ಎಂ. ಮತ್ತಿತರರು ಉಪಸ್ಥಿತರಿದ್ದರು. ದ.ಕ.ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ರಾಜೇಶ್ವರಿ ಎಂ.,ವಂದಿಸಿದರು.

ಇತ್ತೀಚೆಗೆ 80ನೇ ಹುಟ್ಟುಹಬ್ಬ ಹಾಗೂ 50ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಕಸಾಪ ಕಡಬ ತಾಲೂಕು ಅಧ್ಯಕ್ಷ ಕೆ.ಸೇಸಪ್ಪ ರೈ ಅವರನ್ನು ದ.ಕ.ಕಸಾಪ ಅಧ್ಯಕ್ಷ ಡಾ| ಎಂ.ಪಿ.ಶ್ರೀನಾಥ್ ಗೌರವಿಸಿದರು.

LEAVE A REPLY

Please enter your comment!
Please enter your name here