ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

0

ಪುತ್ತೂರು: ಪುರಾತನ ಕಾರಣಿಕ ಕ್ಷೇತ್ರ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿಶೇಷ ಕಾರ್ಯಕ್ರಮಗಳು ಆ.17ರಂದು ನಡೆಯಿತು.
ಬೆಳಿಗ್ಗೆಯಿಂದಲೇ

ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿ ನಾಗನ ಸನ್ನಿಧಿಯಲ್ಲಿ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ, ನಾಗಪೂಜೆ ಮೊದಲಾದ ಸೇವೆಗಳನ್ನು ಸಲ್ಲಿಸಿ ಕೃತಾರ್ಥರಾದರು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here