







ನೆಲ್ಯಾಡಿ: ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನಲ್ಲಿ ನೆಲ್ಯಾಡಿ ಹೊರಠಾಣೆಯ ಹೆಡ್ಕಾನ್ಸ್ಸ್ಟೇಬಲ್ ಶ್ರೀಧರ್ ಅವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಬಳಿಕ ನಡೆದ ಸಮಾರಂಭದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು.


ಎಂಎಲ್ಸಿ ಕಿಶೋರ್ಕುಮಾರ್ ಪುತ್ತೂರು ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಶುಭಹಾರೈಸಿದರು. ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಶುಭಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ಡಾ|ವರ್ಗೀಸ್ ಕೈಪನಡ್ಕ ಒಐಸಿ ಅಧ್ಯಕ್ಷತೆ ವಹಿಸಿದ್ದರು. ರೆ.ಫಾ.ಸಾಮ್ಯುವೆಲ್ ಜಾಜ್ ಒಐಸಿ, ರೆ| ಬ್ರದರ್ ಅಜಿಲ್, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಪ್ರಾಂಶುಪಾಲ ಜೋಸ್ ಎಂ.ಜೆ., ಗಾಯನ, ತೋಮಸ್ ಟೋಮಿ, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪಪ್ರಾಂಶುಪಾಲ ಜೋಸ್ ಎಂ.ಜೆ.ಸ್ವಾಗತಿಸಿದರು. ಸಿಹಿ ತಿಂಡಿ ವಿತರಿಸಲಾಯಿತು.













