







ಬೆಳಿಯೂರು ಕಟ್ಟೆ : ಆಗಸ್ಟ್ 15 ರಂದು ಸ. ಪ. ಪೂ. ಕಾಲೇಜು ಬೆಳಿಯೂರುಕಟ್ಟೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.


ಕಾಲೇಜಿನ ಪ್ರಾಂಶುಪಾಲ ಹರಿಪ್ರಕಾಶ್ ಬೈಲಾಡಿ ಇವರು ಧ್ವಜಾರೋಹಣ ನೆರವೇರಿಸಿ,ಅಧ್ಯಕ್ಷಿಯ ನೆಲೆಯಲ್ಲಿ ಸ್ವಾತಂತ್ರ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.



ಪ್ರೌಢಶಾಲಾ ಎಸ್ ಡಿ ಎಂ ಸಿ ಕಾರ್ಯಧ್ಯಕ್ಷ ಬಿ ಕೆ ಮಹಮ್ಮದ್ ಅಶ್ರಫ್ ಅವರು ಶುಭ ಹಾರೈಸಿ, ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕರಾದ ನಮಿತಾ ಸ್ವಾತಂತ್ರ್ಯದ ಹಿನ್ನಲೆಯ ಕುರಿತು ಮಾತನಾಡಿದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಾವತಿ ಸ್ವಾತಂತ್ರ್ಯದ ಮಹತ್ವವನ್ನು ಸಾರಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದರವಿಕಲಾ ಇವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಹೇಮಲತಾ ಹಾಗೂ ತನುಶ್ರೀ ನಿರೂಪಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸ್ವರ್ಣ ಸ್ವಾಗತಿಸಿ,ಇಂಚರ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ – ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.










