







ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ಸಪ್ಲೈ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್ನಲ್ಲಿ ಆ.20 ರಂದು ಪೂರ್ವಾಹ್ನ 10:೦೦ ರಿಂದ ಅಪರಾಹ್ನ 5:೦೦ ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು ಮತ್ತು ನೆಕ್ಕಿಲಾಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.












