ಆ.29 ರಾಜ್ಯ ಸರಕಾರಿ ನೌಕರರ ಸಂಘದ ಮಹಾಸಭೆ

0

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ಶಾಖೆಯ 2025-26ನೇ ಸಾಲಿನ ಮಹಾಸಭೆಯು ಆ.29ರಂದು ಸರಕಾರಿ ನೌಕರರ ಸಂಘದ ಮೇರಿ ದೇವಾಸಿಯಾ ಸಭಾಂಗಣದಲ್ಲಿ ನಡೆಯಲಿದೆ.


ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ.ಎಸ್., ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ಅಜಿಲ, ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಸುರೇಶ್, ಉಪ್ಪಿನಂಗಡಿ ವಲಯದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ ಅತಿಥಿಗಳಾಗಿ ಆಗಮಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಲ್ಲಿ ನಿವೃತ್ತರಾದ 30 ಮಂದಿ ಸರಕಾರಿ ನೌಕರರು, ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ತಾಲೂಕು ವ್ಯಾಪ್ತಿಯ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ವಿಬಿ-ಜಿ-ರಾಮ್‌ಜಿ ಲೋಗೋ ವಿನ್ಯಾಸ ಮಾಡಿದ ರಾಮ್‌ಪ್ರಸಾದ್ ಕೆ ಮತ್ತು ವರ್ಗಾವಣೆಗೊಂಡಿರುವ ಸಂಘದ ನಿರ್ದೇಶಕರಾದ ಅಬಕಾರಿ ಇಲಾಖೆಯ ವಿಜಯ ಕುಮಾರ್ ಹಾಗೂ ಆರ್ಯಾಪು ಗ್ರಾ.ಪಂ ಪಿಡಿಓ ನಾಗೇಶ್ ಅವರಿಗೆ ಸನ್ಮಾನ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here