ನಾಳೆ (ಆ.20) : ಬ್ಯೂಟಿಷಿಯನ್ ತರಬೇತಿ ಶಿಬಿರದ ಸಮಾರೋಪ

0

ಪುತ್ತೂರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಸಂಯೋಜಿತ ಬ್ಯಾಂಕ್ ಆಫ್ ಬರೋಡ, ಲಯನ್ಸ್ ಕ್ಲಬ್ ಪುತ್ತೂರು, ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಪುತ್ತೂರು, ನವ್ಯಶ್ರೀ ಮಹಿಳಾ ಮಂಡಲ ಪುತ್ತೂರು ಇದರ ಸಹಭಾಗಿತ್ವದಲ್ಲಿ 30 ದಿನಗಳ ಉಚಿತ ಬ್ಯೂಟಿಷಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆ.20ರಂದು ಬೆಳಿಗ್ಗೆ ಗಂಟೆ 10 ರಿಂದ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸಹಕಾರ ಜ್ಯೋತಿ ಸಭಾಭವನ ನಡೆಯಲಿದೆ.


ವಿಆರ್‌ಡಿಎಫ್ ಬ್ಯಾಂಕ್ ಆಫ್ ಬರೋಡ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಹಿಳಾ ವಿವಿಧೋದ್ದೇಶ ಸಹಕಾರಿಸ ಸಂಘದ ಅಧ್ಯಕ್ಷೆ ಗೌರಿ ಬನ್ನೂರು ಅಧ್ಯಕ್ಷತೆ ವಹಿಸಲಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷ ಮಂಜುನಾಥ ಗೌಡ ಕೆ, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಜಯಪ್ರಕಾಶ್ ರೈ, ನವ್ಯಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ರಾವ್, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾವು ಈಶ್ವರಮಂಗಲ ಘಟಕದ ಅಧ್ಯಕ್ಷ ಪಾವನರಾಮ, ಬ್ಯಾಂಕ್ ಆಫ್ ಬರೋಡ ಮಂಗಳೂರು ಇದರ ಪ್ರಧಾನ ವ್ಯವಸ್ಥಾಪಕ ಪಾರ್ಥಸಾರಥಿ ಕೆ, ಬ್ಯಾಂಕ್ ಆಫ್ ಬರೋಡ ಮಂಗಳೂರು ಇದರ ಮುಖ್ಯ ವ್ಯವಸ್ಥಾಪಕ ಭರತ್ ಎಚ್ ವಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here