







ರಾಮಕುಂಜ: ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ನಿವಾಸಿ ಬಿ ಕೆ ಸುಲೈಮಾನ್ (56ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಆ. 19 ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.


ಕೆಲ ದಿನಗಳ ಹಿಂದೆ ಅನಾರೋಗ್ಯ ಕ್ಕೆ ಒಳಗಾಗಿದ್ದ ಸುಲೈಮಾನ್ ಅವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.



ಸುಲೈಮಾನ್ ಅವರು ಸುಮಾರು 20 ವರ್ಷಗಳ ಹಿಂದೆ ಉಪ್ಪಿನಂಗಡಿ – ಆತೂರು ಮಧ್ಯೆ ಟ್ಯಾಕ್ಸಿ ಓಡಾಟ ನಡೆಸುತ್ತಿದ್ದರು. ಆ ಬಳಿಕ ಉದ್ಯಮದಲ್ಲಿ ತೊಡಗಿಕೊಂಡಿದ್ದರು. ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.










