







ಬೆಟ್ಟಂಪಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯಲ್ಲಿ ಆ.20 ರಂದು ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಸದ್ಭಾವನಾ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ವಹಿಸಿದ್ದರು. ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ. ರಾಮಚಂದ್ರ ಅವರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಸದ್ಭಾವನಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಜಾತಿ, ಧರ್ಮ, ಭಾಷೆ ಹಾಗೂ ಪ್ರದೇಶದ ಭೇದಭಾವವಿಲ್ಲದೆ ಎಲ್ಲರಲ್ಲೂ ಸೌಹಾರ್ದತೆ, ಸಹೋದರತ್ವ, ಏಕತೆ ಮತ್ತು ಪರಸ್ಪರ ಗೌರವದ ಮನೋಭಾವವನ್ನು ಬೆಳೆಸುವ ಕುರಿತು ಪ್ರತಿಜ್ಞೆ ಸ್ವೀಕರಿಸಲಾಯಿತು.












