ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯ ತರಬೇತಿ ಉದ್ಘಾಟನೆ

0

ಬಡಗನ್ನೂರುಃ ನಮ್ಮ ಸಾಧನೆಯ ಫಲ ದೀರ್ಘಕಾಲ ದೊರೆಯುವಂತಾಗಬೇಕು. ವಿದ್ಯಾರ್ಥಿಗಳು ಇದನ್ನು ಮನಗಂಡು ನಿರಂತರ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಎಂದು ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ, ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ನಿರ್ದೇಶಕ ಗಣರಾಜ ಕುಂಬ್ಳೆ ಹೇಳಿದರು . ಅವರು ಪಟ್ಟೆ ಬಡಗನ್ನೂರು ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ(NMMS)ಯ ಪೂರ್ವ ತಯಾರಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.



ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಹಾಜರಾಗುವ ಎಂಟನೇ ತರಗತಿಯ ವಿದ್ಯಾರ್ಥಿಗಳು ಮತ್ತು ಮಕ್ಕಳ ಪೋಷಕರು ಭಾಗವಹಿಸಿದರು.ಸಂಸ್ಥೆಯ ಮುಖ್ಯ ಗುರುಗಳಾದ ಸುಮನಾ ಬಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಹ ಶಿಕ್ಷಕಿ ಭವಿತಾ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here