







ಉಪ್ಪಿನಂಗಡಿ: ಶಾಸಕ ಅಶೋಕ್ ಕುಮಾರ್ ರೈಯವರ ಸತತ ಪ್ರಯತ್ನದ ಫಲವಾಗಿ ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ಸರಕಾರಿ ಮೆಡಿಕಲ್ ಕಾಲೇಜಿಗಾಗಿ 574.79 ಕೋ. ರೂ. ಅನುದಾನ ಮಂಜೂರಿಗೆ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೌಸೀಫ್ ಯು.ಟಿ., ಇದು ಪುತ್ತೂರಿನ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆಯಾಗಿದ್ದು, ಪುತ್ತೂರಿನ ಅಭಿವೃದ್ಧಿಗಾಗಿ ಶಾಸಕ ಅಶೋಕ್ ಕುಮಾರ್ ರೈಯವರ ಮತ್ತೊಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಶಬೀರ್ ಕೆಂಪಿ, ನಝೀರ್ ಮಠ, ಆದಂ ಕೊಪ್ಪಳ, ಲತೀಫ್ ಕುದ್ಲೂರು, ಅಲ್ತಾಫ್ ಮೈತ್ರಿ, ಫೈಝಲ್ ಯು.ಟಿ. ಹಾಗೂ ರಫೀಕ್ ಝೆನ್ ಮತ್ತಿತರರು ಉಪಸ್ಥಿತರಿದ್ದರು.















