






ಪುತ್ತೂರು: ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.23 ರಂದು ಬೆಳಿಗ್ಗೆ 10:30ಕ್ಕೆ ಕುಂಬ್ರದ ಅಕ್ಷಯ್ ಆರ್ಕೇಡ್ನ ಮಿನಿ ಸಭಾಂಗಣದಲ್ಲಿ ನಡೆಯಲಿದೆ.


ಸಂಘದ ಅಧ್ಯಕ್ಷರಾದ ಆರ್. ಸಿ. ನಾರಾಯಣ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಮೂರ್ತೆದಾರರ ಸಹಕಾರಿ ಮಹಾಮಂಡಲ ಬಿ.ಸಿ.ರೋಡಿನ ಅಧ್ಯಕ್ಷ ಸಂಜೀವ ಪೂಜಾರಿ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕೆಡೆಂಜಿ ಹಾಗೂ ಸಂಪ್ಯ ಅಕ್ಷಯ್ ಗ್ರೂಪ್ಸ್ ಸಂಸ್ಥೆಯ ಮಾಲಕ, ಉದ್ಯಮಿ ಜಯಂತ ನಡುಬೈಲು ಭಾಗವಹಿಸಲಿದ್ದಾರೆ. ಸಂಘದ ಸಮಸ್ತ ಸದಸ್ಯರು ಸಮಯಕ್ಕೆ ಸರಿಯಾಗಿ ಹಾಜರಿದ್ದು ಕಾರ್ಯಸೂಚಿಗಳ ಕುರಿತು ಚರ್ಚಿಸಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಯಲ್ಲಿ ಸಹಕರಿಸಬೇಕಾಗಿ ಸಂಘದ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕೆ. ವಿನಂತಿಸಿಕೊಂಡಿದ್ದಾರೆ.













