ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಪ್ರಥಮ ಬಾರಿಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಪ್ರಶಸ್ತಿ

0

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಪ್ರಥಮ ಬಾರಿಗೆ ಸಾಧನಾ ಪ್ರಶಸ್ತಿ ಲಭಿಸಿದೆ.

2025-26ನೇ ಆರ್ಥಿಕ ಸಾಲಿನಲ್ಲಿ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘವು ರೂ. 294.84 ಕೋಟಿ ವ್ಯವಹಾರ ಮಾಡಿ, ರೂ.24. 37 ಕೋಟಿ ಠೇವಣಿ ಸಂಗ್ರಹಿಸಿ, ರೂ. 21.94 ಕೋಟಿ ಸಾಲ ನೀಡಿದ್ದು, ರೂ. 48.51 ಲಕ್ಷ ಲಾಭ ಗಳಿಸಿ ಅಭೂತಪೂರ್ವ ಸಾಧನೆ ಮಾಡಿದೆ. ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷರಾದ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ಅವರು ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ಎನ್. ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪಿ. ಅವರನ್ನು ಪ್ರಶಸ್ತಿ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಎಸ್‌ ಸಿಡಿಸಿಸಿ ಬ್ಯಾಂಕ್ ನ ನಿರ್ದೇಶಕರುಗಳಾದ ಶಶಿಕುಮಾ‌ರ್ ರೈ ಬಾಲ್ಯೊಟು, ಎಸ್.ಎನ್.ಮನ್ಮಥ, ಎಸ್.ಬಿ.ಜಯರಾಮ ರೈ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್, ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ ಎಂ ಎಸ್, ಪ್ರಕಾಶ್ ಕೆ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here