






ಉಪ್ಪಿನಂಗಡಿ: ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘವು ಸಾಲ ವಸೂಲಾತಿಯಲ್ಲಿ ಶೇ.100 ಸಾಧನೆ ಮಾಡಿದ್ದು, ಇದಕ್ಕಾಗಿ ಆ.22ರಂದು ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ನ ಮಹಾಸಭೆಯಲ್ಲಿ ಪೆರ್ನೆ ಸಿಎ ಬ್ಯಾಂಕ್ಗೆ ‘ಸಾಧನಾ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುತ್ತಿರುವ ಈ ಪ್ರಶಸ್ತಿಯನ್ನು ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘವು 20ನೇ ಬಾರಿ ಪಡೆಯುತ್ತಿದೆ. ಈ ಸಂದರ್ಭ ಸಂಘದ ಅಧ್ಯಕ್ಷ ಎಸ್. ತೋಯಜಾಕ್ಷ ಶೆಟ್ಟಿ, ಉಪಾಧ್ಯಕ್ಷ ತನಿಯಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಡಿ., ನಿರ್ದೇಶಕರಾದ ಸುನೀಲ್ ನೆಲ್ಸನ್ ಪಿಂಟೋ, ರೇವತಿ ಪಿ. ಉಪಸ್ಥಿತರಿದ್ದರು.













