ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ: ಬಂದ್‌ಗೆ ಕರೆ ನೀಡಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

0

ಪುತ್ತೂರು: ಪುತ್ತೂರು ದರ್ಬೆ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಧಾರ್ಮಿಕ ವೈಮನಸ್ಸು ಉಂಟಾಗುವ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆ ಹೊಂದಿರುವ ವ್ಯಕ್ತಿಯು ವಾಟ್ಸಾಪ್ ಮೂಲಕ ಧಾರ್ಮಿಕ ವೈಮನಸ್ಸು ಉಂಟಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯ ಉಂಟು ಮಾಡುವ ಸಂದೇಶವನ್ನು ಪ್ರಸಾರ ಮಾಡಿ, ಬಂದ್‌ಗೆ ಕರೆ ನೀಡಿ ಜನರು ಅಕ್ರಮ ಕೂಟ ಸೇರಿ ಕಾನೂನುಬಾಹಿರ ಕೃತ್ಯವೆಸಗಲು ದುಷ್ಪ್ರೇರಣೆ ನೀಡಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ದಿನೇಶ್ ಪಂಜಿಗ ಎಂಬ ವಾಟ್ಸಾಪ್ ಖಾತೆ ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 100/2026, ಕಲಂ: 353(2), 57, 189 THE BHARATIYA NYAYA SANHITA (BNS) 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here