






ಪುತ್ತೂರು :ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಕಬಕ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 21 ರಂದು ನಡೆದ ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯಲ್ಲಿ 14ರ ವಯೋಮಿತಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಕೌಶಿಕ್ ಎಸ್ ಆರ್ (7 ನೇ) ಅನ್ವೇಷ್ ಪರ್ಪಲ (7 ನೇ) ಹಾಗೂ ದತ್ತ ಚರಣ ಸಿ ಎಸ್ ( 8ನೇ) ಸ್ಪರ್ಧಿಸಿ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.


ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್ , ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.













