






ಸುಳ್ಯ: ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲೆ ಸುಳ್ಯ ತಾಲೂಕು ಘಟಕದ ವತಿಯಿಂದ ಇತ್ತೀಚೆಗೆ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಹಾಜಿ ಅಬ್ದುಲ್ ಹಮೀದ್ ಜನತಾ ಮತ್ತು ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ನ 59ನೇ ವರ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಬಿ. ಇಬ್ರಾಹಿಂ ಅವರನ್ನು ಅನ್ಸಾರ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.


ಘಟಕದ ಅಧ್ಯಕ್ಷ ಅಡ್ವೊಕೇಟ್ ಮೂಸ ಪೈಂಬಚ್ಚಾಲ್ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಅನ್ಸಾರಿಯ ಎಜುಕೇಶನ್ ಸೆಂಟರ್ ಅಧ್ಯಕ್ಷ ಹಾಜಿ ಅಬ್ದುಲ್ ಮಜೀದ್ ಜನತಾ, ಅನ್ಸಾರ್ ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ಅನ್ಸಾರಿಯ ಉಪಾಧ್ಯಕ್ಷ ಎಸ್.ಪಿ. ಅಬೂಬಕ್ಕರ್, ಝ್ಯನಿಯಾ ಮಹಿಳಾ ಕಾಲೇಜು ಅಧ್ಯಕ್ಷ ಹಾಜಿ ಇಬ್ರಾಹಿಂ ಕತ್ತಾರ್, ಜೆಎಫ್ ಕಾರ್ಯದರ್ಶಿ ಹಸೈನಾರ್ ವಳಲಂಬೆ, ಪುತ್ತೂರು ಜಮೀಯತುಲ್ ಫಲಾಹ್ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ, ಎಂ.ಜೆ.ಎಂ ನಿರ್ದೇಶಕ ಮುಹಿಯ್ಯದ್ದೀನ್ ಫ್ಯಾನ್ಸಿ ಮತ್ತಿತರರು ಉಪಸ್ಥಿತರಿದ್ದರು.













