







ಆಲಂಕಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಲಂಕಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರೋತ್ಸಾಹಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಂಗಳೂರಿನಲ್ಲಿ ನಡೆದ ಎಸ್ಸಿಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.


ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ರವರು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ ಭಟ್ ಉಪ್ಪಂಗಳ
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಹರ ಪ್ರಕಾಶ್. ಡಿಯವರಿಗೆ ಶಾಲು ಹೊದಿಸಿ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಗೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ,ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು
ಉಪಸ್ಥಿತರಿದ್ದರು.













