







ಪುತ್ತೂರು : ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಸಂಸ್ಥೆಯು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಯನ್ನು ಗುರುತಿಸಿ ಡಿ.ಸಿ.ಸಿ.ಬ್ಯಾಂಕ್ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಿದೆ.


ಆ. 22 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಮತ್ತು ಸಂಘದ ಪ್ರಭಾರ ವ್ಯವಸ್ಥಾಪನಾ ನಿರ್ದೇಶಕ ಜಯಾನಂದರವರನ್ನು ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಪಾಂಡುರಂಗ ಹೆಗ್ಡೆ,ತನಿಯಪ್ಪ ಗೌಡ,ಶ್ರೀಮತಿ ಸುಶೀಲ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.













