ನೆಲ್ಯಾಡಿ: ಭೂ ವಿವಾದ, ಮಾರಕಾಯುಧದಿಂದ ಹಲ್ಲೆಗೆ ಯತ್ನ-ಜೀವ ಬೆದರಿಕೆ ಆರೋಪ

0

ನೆಲ್ಯಾಡಿ: ಭೂ ವಿವಾದಕ್ಕೆ ಸಂಬಂಧಿಸಿ ನೆಲ್ಯಾಡಿ ಗ್ರಾಮದ ಹುಣ್ಸೆಬೆಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಯುಧದಿಂದ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಹುಣ್ಸೆಬೆಟ್ಟು ನಿವಾಸಿ ಹೆಚ್. ಸೂರ್ಯನಾರಾಯಣ ಜೋಗಿತ್ತಾಯ ಅವರು ಲೋಕ ಅದಾಲತ್‌ನಲ್ಲಿ ಮಂಜೂರಾಗಿರುವ ಭೂಮಿಯಲ್ಲಿ ತಂತಿ ಬೇಲಿ ನಿರ್ಮಿಸಿ ಹುಲ್ಲು ತೆಗೆಯುತ್ತಿದ್ದ ಸಂದರ್ಭದಲ್ಲಿ ವಾಸುದೇವ ಗೌಡ ಎಂಬವರು ಅಕ್ರಮವಾಗಿ ಪ್ರವೇಶಿಸಿ ಕೊಕ್ಕೆ ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ ಸೂರ್ಯನಾರಾಯಣ ಜೋಗಿತ್ತಾಯ ಅವರನ್ನು ಕೊಲ್ಲುವುದಾಗಿ ಜೀವ ಬೆದರಿಕೆಯೊಡ್ಡಿದ್ದು, ಘಟನೆಯ ವೇಳೆ ರಕ್ಷಣೆಗೆ ಬಂದ ಅವರ ಪತ್ನಿ ಹಾಗೂ ತಮ್ಮನ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯಿಂದ ಸೂರ್ಯನಾರಾಯಣ ಜೋಗಿತ್ತಾಯ ಅವರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here