ಕುಂಬ್ರ: ಕುಡಿಯುವ ನೀರಿನ ಸಮಸ್ಯೆ ತಕ್ಷಣ ಬಗೆಹರಿಸಿ ತಾ.ಪಂ ಕಾರ್ಯನಿರ್ವಹಣಾಧಿಕಾರಿಗೆ ಒಳಮೊಗ್ರು ಬಿಜೆಪಿ ಮನವಿ

0

ಪುತ್ತೂರು : ಒಳಮೊಗ್ರು ಗ್ರಾಮದ ಕುಂಬ್ರ ಸಾರ್ವಜನಿಕ ಕುಡಿಯುವ ನೀರಿನ ಕೊಳವೆಬಾವಿ ಜರಿದುಬಿದ್ದು, ಕಳೆದ ಒಂದು ತಿಂಗಳಿನಿಂದ ಸಾರ್ವಜನಿಕರಿಗೆ ತೀವ್ರ ಕುಡಿಯುವ ನೀರಿನ ಅಭಾವ ಎದುರಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ಸಮಸ್ಯೆಗೆ ಸೂಕ್ತ ಪರಿಹಾರ ಸಿಗದ ಕಾರಣ, ಪರ್ಯಾಯ ವ್ಯವಸ್ಥೆಯಾಗಿ ತಕ್ಷಣವೇ ಹೊಸ ಕೊಳವೆಬಾವಿ ಕೊರೆಸುವಂತೆ ಆಗ್ರಹಿಸಿ ಬಿಜೆಪಿ ಒಳಮೊಗ್ರು ಮಹಾಶಕ್ತಿ ಕೇಂದ್ರದ ವತಿಯಿಂದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕುಂಬ್ರ ಪ್ರದೇಶದಲ್ಲಿ ದಿನೇ ದಿನೇ ನೀರಿನ ಅಭಾವ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಹೀಗಾಗಿ ತಾ.ಪಂ ಆಡಳಿತವು ಮಧ್ಯಪ್ರವೇಶಿಸಿ ತಕ್ಷಣವೇ ಹೊಸ ಕೊಳವೆಬಾವಿ ಕೊರೆಸಿ ಸಾರ್ವಜನಿಕರಿಗೆ ಸುಸೂತ್ರವಾಗಿ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ನಾಯಕರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಹರೀಶ್ ಬಿಜತ್ರೆ, ಬಿಜೆಪಿ ನಿಕಟಪೂರ್ವ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ನೆಟ್ಟಣಿಗೆ-ಮುಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಪ್ರಮುಖ್ ಮಹೇಶ್ ಕೇರಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಪ್ರದೀಪ್ ಸೇರ್ತಾಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here