







ಪುತ್ತೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸೆ.19ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.


ಲೋಕ ಅದಾಲತ್ನಲ್ಲಿ ಸರ್ವಜನರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಆಸಕ್ತಿ ಹೊಂದಿರುವವರು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದುಕೊಳ್ಳುವಂತೆ ಕಾನೂನು ಸೇವೆಗಳ ಪ್ರಾಧಿಕಾರ ತಿಳಿಸಿದೆ.



ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಗೆ ಅವಕಾಶವಿರುವ ಪ್ರಕರಣಗಳನ್ನು ಸಂಬಂಧಪಟ್ಟ ನ್ಯಾಯಾಲಯದ ಮೂಲಕ ಲೋಕ ಅದಾಲತ್ಗೆ ತರಬಹುದಾಗಿದೆ. ಅದೇ ರೀತಿ ವ್ಯಾಜ್ಯಪೂರ್ವ ಹಂತದಲ್ಲಿರುವ ಪ್ರಕರಣಗಳನ್ನೂ ಸಂಬಂಧಪಟ್ಟ ಕಾನೂನು ಸೇವಾ ಸಮಿತಿಯ ಮೂಲಕ ರಾಜಿ ಮಾಡಿಕೊಳ್ಳಲು ಅವಕಾಶವಿದೆ. ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ವಕೀಲರು ಹಾಗೂ ಕಕ್ಷಿದಾರರಿಗೆ ಅನುಕೂಲವಾಗುವಂತೆ ಕ್ಯೂಆರ್ ಕೋಡ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್ಸೈಟ್ ಅಥವಾ 15100 ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್. ಶಶಿಧರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದು ಕೊಳ್ಳಲು ಕ್ಯೂ ಆರ್ ಕೋಡ್ ಮೂಲಕ ಟೆಲಿಗ್ರಾಂ ಛಂದಾದರಾಗಬೇಕೆಂದು ಮನವಿ ಮಾಡಲಾಗಿದೆ.










