ಅಕ್ಟೋಬರ್‌ನಿಂದ `ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0′ ವಿಶೇಷ ಅಭಿಯಾನ : ಎರಡೂ ಪಕ್ಷಗಾರರು ಅವಕಾಶ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ

0

ಪುತ್ತೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ 2026ನೇ ಸಾಲಿನ ಅಕ್ಟೋಬರ್ 1ರಿಂದ ಡಿಸೆಂಬರ್ 30ರವರೆಗೆ `ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 3.0-ವಿಶೇಷ ಮಧ್ಯಸ್ಥಿಕೆ ಅಭಿಯಾನ’ ಎಂಬ 90 ದಿನಗಳ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.


ಈ ಹಿನ್ನೆಲೆಯಲ್ಲಿ ಆಗಸ್ಟ್ 1 ರಿಂದ ಸೆಪ್ಟೆಂಬರ್ 30ರವರೆಗೆ ವಿಶೇಷ ಮಧ್ಯಸ್ಥಿಕೆ ಅಭಿಯಾನಕ್ಕೆ ಒಳಪಡಬಹುದಾದ ಪ್ರಕರಣಗಳನ್ನು ಗುರುತಿಸುವಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಅಕ್ಟೋಬರ್‌ನಿಂದ ಡಿಸೆಂಬರ್ ಅಂತ್ಯದವರೆಗೆ ಈ ವಿಶೇಷ ಅಭಿಯಾನ ನಡೆಯಲಿದೆ. ಪ್ರಕರಣಗಳ ಇತ್ಯರ್ಥದಲ್ಲಿ ಸಂಬಂಧಿಸಿದ ಎರಡೂ ಪಕ್ಷಗಾರರು ಹಾಜರಾಗಿ, ಮಧ್ಯಸ್ಥಿಕೆ ನಡೆಸುವ ವಕೀಲರಿಗೆ ಸಹಕರಿಸುವ ಮೂಲಕ ತಮ್ಮ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ತಾಲೂಕು ಕಾನೂನು ಸೇವೆಗಳ ಸಮಿತಿ ಮನವಿ ಮಾಡಿದೆ. ಅಭಿಯಾನದ ಕುರಿತು ಹೆಚ್ಚಿನ ಮಾಹಿತಿಗಾಗಿ ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here