







ಪುತ್ತೂರು: ವಿಶ್ವಕರ್ಮ ಮಹಿಳಾ ಮಂಡಳಿ ಇದರ ವತಿಯಿಂದ ವಿಶ್ವ ಬ್ರಾಹ್ಮಣ ಸೇವಾ ಸಂಘದ ಸಹಕಾರದೊಂದಿಗೆ ವರಮಹಾಲಕ್ಷ್ಮೀ ಪೂಜೆಯು ಆ.28ರಂದು ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.
ವೇ ಮೂ ಅಭಿಷೇಕ ಪುರೋಹಿತರ ಆಚಾರ್ಯತ್ವದಲ್ಲಿ ನಡೆಯಲಿರುವ ಶ್ರೀ ವರಮಹಾಲಕ್ಷ್ಮೀ ಪೂಜೆ ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ ನಡೆಯಲಿದೆ. ಪೂಜೆ ಸೇವೆ ಮಾಡಿಸುವ ಭಕ್ತರು ಸೇವಾ ರಶೀದಿಯನ್ನು ಪಡೆಯುವಂತೆ ವಿನಂತಿಸಲಾಗಿದೆ.
ಅದೇ ರೀತಿ ಹೊರೆ ಕಾಣಿಕೆ ಸಮರ್ಪಿಸುವವರು ಆ.27ರ ಒಳಗೆ ಸಭಾಭವನಕ್ಕೆ ತಂದೊಪ್ಪಿಸುವಂತೆ ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ಶಾಂತಿ ಸತೀಶ್ ಆಚಾರ್ಯ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.











