






ಉಪ್ಪಿನಂಗಡಿ: ಶ್ರೀ ಮಾಧವ ಶಿಶು ಮಂದಿರದ ಆಶ್ರಯದಲ್ಲಿ ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ ಶ್ರೀ ಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಇಂದ್ರಪ್ರಸ್ಥ ವಿದ್ಯಾಲಯದ ಇಂದ್ರಪ್ರಭ ಸಭಾಂಗಣದಲ್ಲಿ ನಡೆಸಲಾಯಿತು.


ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಇಂದ್ರಪ್ರಸ್ಥ ವಿದ್ಯಾಲಯದ ಅಧ್ಯಕ್ಷ ಕರುಣಾಕರ ಸುವರ್ಣ, ಮಕ್ಕಳಲ್ಲಿನ ಪ್ರತಿಭೆಗಳ ಅನಾವರಣಕ್ಕೆ ಇಂತಹ ಸ್ಪರ್ಧೆಗಳು ಉತ್ತೇಜನಕಾರಿಯಾಗಿದೆ ಎಂದರು.



ಶಿಶು ಮಂದಿರದ ಅಧ್ಯಕ್ಷ ಹರಿರಾಮಚಂದ್ರ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಕಂಗ್ವೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಸುಜಾತ ಕೃಷ್ಣ ಆಚಾರ್ಯ, ಕೋಶಾಧಿಕಾರಿ ಗಾಯತ್ರಿ ವಸಂತ್ , ಜೊತೆ ಕಾರ್ಯದರ್ಶಿ ಎನ್. ರಾಘವೇಂದ್ರ ನಾಯಕ್, ಸದಸ್ಯರಾದ ಯು. ರಾಜೇಶ್ ಪೈ, ಎಚ್. ಸುಬ್ರಹ್ಮಣ್ಯ ಶೆಣೈ, ಯತೀಶ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು. ಶಿಶು ಮಂದಿರದ ಮಾತಾಜಿಗಳಾದ ಚೈತ್ರಾ ಹಾಗೂ ಕಾಂತಿಮಣಿ ಕಾರ್ಯಕ್ರಮ ನಿರೂಪಿಸಿದರು.










