







ಪುತ್ತೂರು: ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಮುಸ್ಲಿಂ ಯುವಜನ ಪರಿಷತ್ತು ಮತ್ತು ಈದ್ ಮಿಲಾದ್ ಜಂಟಿ ಆಶ್ರಯದಲ್ಲಿ ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ಮತ್ತು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸಲಾಯಿತು.
ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯದುರಾಜ್ ಅವರ ಮೂಲಕ ಆಸ್ಪತ್ರೆಯ ರೋಗಿಗಳಿಗೆ ಮತ್ತು ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ಆಶ್ರಮದ ಅಣ್ಣಪ್ಪ ದಂಪತಿಯ ಮೂಲಕ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭ ಮೀಲಾದ್ ಸಮಿತಿ ಮತ್ತು ಮುಸ್ಲಿಂ ಯುವಜನ ಪರಿಷತ್‌ನ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.












