ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸುಳ್ಳು ಸುದ್ದಿ – ಪ್ರಕರಣ ದಾಖಲು

0

ಪುತ್ತೂರು: ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಾಮಾಜಿಕ ಜಾಲತಾಣ (ವಾಟ್ಸಾಪ್) ದಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಾಟ್ಸಾಪ್ ಮೂಲಕ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ, ದಿನಾಂಕ 26.08.2026ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಸದ್ರಿ ವಾಟ್ಸಾಪ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 353(2) THE BHARATIYA NYAYA SANHITA (BNS), 2023ರಂತೆ ಪ್ರಕರಣ ದಾಖಲು ಮಾಡಲಾಗಿದೆ.

LEAVE A REPLY

Please enter your comment!
Please enter your name here