ಐಜಿಪಿ ಅಮಿತ್ ಸಿಂಗ್ ಪುತ್ತೂರಿಗೆ ಭೇಟಿ

0

ಪುತ್ತೂರು: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಹಾಗೂ ಹಿಂದೂ ಜಾಗರಣಾ ವೇದಿಕೆ ನೀಡಿರುವ ಸ್ವಯಂ ಪ್ರೇರಿತ ಮುಷ್ಕರಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಪರಿಸ್ಥಿತಿಯನ್ನು ಅವಲೋಕಿಸಲು ಪಶ್ಚಿಮ ವಲಯ ಮಹಾ ಪೊಲೀಸ್ ನಿರೀಕ್ಷಕ (ಐಜಿಪಿ) ಅಮಿತ್ ಸಿಂಗ್ ಅವರು ಆ.25ರಂದು ಪುತ್ತೂರಿಗೆ ಭೇಟಿ ನೀಡಿದರು.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಪುತ್ತೂರಿನ ದರ್ಭೆಯಲ್ಲಿರುವ ನಿರೀಕ್ಷಣಾ ಮಂದಿರಕ್ಕೆ ಆಗಮಿಸಿದ ಐಜಿಪಿ ಅಮಿತ್ ಸಿಂಗ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮತ್ತು ಡಿವೈಎಸ್ಪಿ ಪ್ರಮೋದ್ ಕುಮಾರ್ ಬಿ ಅವರು ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಪರಿಸ್ಥಿತಿ ಮತ್ತು ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here