ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

0

ಉಪ್ಪಿನಂಗಡಿ: ವಿಶ್ವಹಿಂದೂ ಪರಿಷತ್, ಭಜರಂಗದಳ ಮತ್ತು ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ಸೆ.5ರಂದು ಉಪ್ಪಿನಂಗಡಿಯಲ್ಲಿ ಮೊಸರು ಕುಡಿಕೆ ಉತ್ಸವ ಹಾಗೂ ವಿಶ್ವಹಿಂದೂ ಪರಿಷತ್ ಸ್ಥಾಪನಾ ದಿನಾಚರಣೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಸುರೇಶ್ ಅತ್ರಮಜಲು, ಕಾರ್ಯದರ್ಶಿ ಸಂತೋಷ್ ಅಡೆಕ್ಕಲ್, ಉಪಾಧ್ಯಕ್ಷರಾದ ತಿಮ್ಮಪ್ಪ ಇಳಂತಿಲ, ಪ್ರತಾಪ್ ಪೆರಿಯಡ್ಕ, ಹೊನ್ನಪ್ಪ ಗೌಡ ವರೆಕ್ಕ, ವಿಶ್ವ ಹಿಂದೂ ಪರಿಷತ್, ಭಜರಂಗದಳದ ಉಪ್ಪಿನಂಗಡಿ ಪ್ರಖಂಡದ ಅಧ್ಯಕ್ಷ ಸುದರ್ಶನ್, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ವೆಂಕಪ್ಪ ಪೂಜಾರಿ ಮರುವೇಲು, ವ್ಯವಸ್ಥಾಪಕ ವೆಂಕಟೇಶ್ ರಾವ್, ಪ್ರಮುಖರಾದ ರಾಮಚಂದ್ರ ಮಣಿಯಾಣಿ, ಜಯಂತ ಪೊರೋಳಿ, ಕೈಲಾರು ರಾಜಗೋಪಾಲ ಭಟ್, ಗೌತಮ್ ನೆಕ್ಕಿಲಾಡಿ, ರವಿನಂದನ್ ನಟ್ಟಿಬೈಲು, ಕೃಷ್ಣಪ್ರಸಾದ್ ದೇವಾಡಿಗ, ಮಹೇಶ್ ಬಜತ್ತೂರು, ವಿಶ್ವಹಿಂದೂ ಪರಿಷತ್, ಭಜರಂಗದಳ, ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here