







ಪುತ್ತೂರು: ದರ್ಬೆಯಲ್ಲಿ ಆ.21ರಂದು ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಪೊಲೀಸರು 17 ಮಂದಿಗೆ ನೋಟಿಸ್ ಜಾರಿ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.


ಘಟನೆ ಸಂದರ್ಭ ಜಮಾಯಿಸಿ ಗಲಭೆ ಮತ್ತು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು ಸಹಿತ ಒಟ್ಟು ಘಟನೆಗೆ ಸಂಬಂಧಿಸಿ ದಾಖಲಾಗಿರುವ ವೀಡಿಯೋ ಆಧರಿಸಿ ಸುಮಾರು 17 ಮಂದಿಯ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟೀಸ್ ಜಾರಿ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.













