ಆ.28 ಮುಕ್ರಂಪಾಡಿಯಲ್ಲಿ ಪುತ್ತಿಲ ಪರಿವಾರದಿಂದ ಮೂರನೇ ವರ್ಷದ ವರಮಹಾಲಕ್ಷ್ಮೀ ಪೂಜಾ ಸಂಭ್ರಮ

0

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ವರಮಹಾಲಕ್ಷ್ಮೀ ಪೂಜಾ ಸಮಿತಿ ಪುತ್ತೂರು ಹಾಗೂ ಸೀತಾಪರಿವಾರ ಇದರ ಇದರ ಆಶ್ರಯದಲ್ಲಿ ಮೂರನೇ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆಯು ಆ.28ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಮುಕ್ರಂಪಾಡಿ ಸುಭದ್ರ ಕಲಾ ಮಂದಿರದಲ್ಲಿ ಸಂಭ್ರಮಿಸಲಿದೆ.

ಬೆಳಿಗ್ಗೆ 7ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. 10 ಗಂಟೆಯಿಂದ ವರಮಹಾಲಕ್ಷ್ಮೀ ಪೂಜೆ ಪ್ರಾರಂಭಗೊಳ್ಳಲಿದೆ. ಮಧ್ಯಾಹ್ನ 12 ಗಂಟೆಗೆ ನಡೆಯುವ ಧಾಮಿಕ ಸಭಾ ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ವೀಣಾ ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ.

ಐಕಾನಿಕ್ ಟೈಲ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರೇಮಲತಾ ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ನಳಿನಾಕ್ಷಿ ಕಲ್ಮಡ್ಕ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಪುತ್ತೂರು ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕಿ ರಮ್ಯ ಭಾಗ್ಯೇಶ್ ರೈ ಹಾಗೂ ಕಾವೇರಿ ಬಿ. ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ವರಮಹಾಲಕ್ಷ್ಮೀ ಪೂಜಾ ಸಮಿತಿ ಪ್ರಕಟಣೆ ತಿಳಿಸಿದೆ.

ಪುತ್ತಿಲ ಪರಿವಾರ ಟ್ರಸ್ಟ್ ನ ಸಹಯೋಗದಲ್ಲಿ ನಡೆಯುವ ವರಮಹಾಲಕ್ಷ್ಮೀ ಪೂಜೆ ಪುತ್ತೂರಿನಲ್ಲಿ ಬಹುದೊಡ್ಡ ಕಾರ್ಯಕ್ರಮವಾಗಿದೆ. ಕಳೆದ ವರ್ಷನಡೆದ ಪೂಜಾ ಕಾರ್ಯಕ್ರಮದಲ್ಲಿ ಸುಮಾರು ಐದು ಸಾವಿರ ಮಂದಿ ವರಮಹಾಲಕ್ಷ್ಮೀ ಪೂಜಾ ಸೇವೆ ಸಲ್ಲಿಸಿದ್ದರು. ಪೂಜಾ ಸೇವೆ ಸಲ್ಲಿಸಿದ ಮಹಿಳೆಯರಿಗೆ ಬಳೆ, ಸೀರೆಗಳ ವಿತರಿಸಲಾಗಿತ್ತು. ಈ ವರ್ಷವೂ ಪೂಜೆಗೆ ಎಲ್ಲಾ ಸಿದ್ದತೆಗಳು ನಡೆದಿದ್ದು ಸುಮಾರು 10 ಸಾವಿರ ಮಂದಿ ಸೇರುವ ನಿರೀಕ್ಷೆಯಿದೆ. ಪೂಜೆ ಸಲ್ಲಿಸಿದ ಮಹಿಳೆಯರಿಗೆ ಈ ವರ್ಷವೂ ದ ಮಹಿಳೆಯರಿಗೆ ಬಳೆ, ಸೀರೆಗಳ ವಿತರಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆಯ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಸಾಮಾಜಿಕವಾಗಿ ಟ್ರಸ್ಟ್ ನ ಸೇವೆ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಖಾಂತರ ಕಳೆದ ಮೂರು ವರ್ಷಗಳಿಂದ ವೈದ್ಯಕೀಯ ಶಿಬಿರ, ಅಶಕ್ತರು, ಶೋಷಿತರಿಗೆ ಸಹಕಾರ, ಅನೇಕ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆ ನೀಡುತ್ತಿದೆ. ಅಲ್ಲದೆ ಕಳೆದ ಮೂರು ವರ್ಷಗಳಿಂದ ಟ್ರಸ್ಟ್ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಮೂಲಕ ಅದ್ದೂರಿಯಾಗಿ ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಿಸುವ ಜೊತೆಗೆ ಕಳೆದ ವರ್ಷ ಉಚಿತ ಸಾಮೂಹಿಕ ವಿವಾಹವನ್ನು ಅದ್ಧೂರಿಯಾಗಿ ಆಯೋಜಿಸಿದೆ ಎಂದು ಟ್ರಸ್ಟ್ ನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here