ನಾಳೆ (ಆ.28): ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ, ಧಾರ್ಮಿಕ ಸಭೆ

0

ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಆ.28ರಂದು ನಡೆಯಲಿದೆ.


ಬೆಳಗ್ಗೆ 8.30ಕ್ಕೆ ಕಲಶ ಪ್ರತಿಷ್ಠೆ ಹಾಗೂ ವರಮಹಾಲಕ್ಷ್ಮೀ ಪೂಜೆ ಪ್ರಾರಂಭಗೊಳ್ಳಲಿದೆ. ಪೂರ್ವಾಹ್ನ 10.30ಕ್ಕೆ ಮಹಾಪೂಜೆ, ಮಂಗಳಾರತಿ ನಡೆಯಲಿದೆ. ಪೂರ್ವಾಹ್ನ 11ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ಸತೀಶ್ ಭಟ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಪೂಜಾ ಸಮಿತಿ ಅಧ್ಯಕ್ಷೆ ವಿದ್ಯಾವತಿ ಪರಂಗಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಶೈಲಜಾ ಶೆಣೈ ಉಪ್ಪಿನಂಗಡಿ, ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್‌ಕುಮಾರ್ ರೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here