ನಾಳೆ ನೆಲ್ಯಾಡಿ ಶಬರೀಶ ಕಲಾಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನೆಲ್ಯಾಡಿ ಇದರ ಸಹಯೋಗದಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.28ರಂದು ಬೆಳಗ್ಗೆ 9.30ರಿಂದ ನೆಲ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಬರೀಶ ಕಲಾಮಂದಿರದಲ್ಲಿ ನಡೆಯಲಿದೆ.


ಬೆಳಗ್ಗೆ 9ಕ್ಕೆ ಭಜನೆ, 9.30ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ ಆರಂಭ, ಮಧ್ಯಾಹ್ನ 12 ಗಂಟೆಗೆ ಪ್ರಶಾಂತ್ ಕಡಬ ಅವರಿಂದ ಭಕ್ತಿ ರಸಮಂಜರಿ ನಡೆಯಲಿದೆ. ಈ ಸಂದರ್ಭದಲ್ಲಿ ಕಲಾವಿದರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಕಾಮಧೇನು ಶ್ರೀ ವರಮಹಾಲಕ್ಷ್ಮೀ ಸೇವಾ ಸಮಿತಿ ಅಧ್ಯಕ್ಷೆ ಉಷಾ ಅಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here